ಆರೋಗ್ಯ ಕ್ಷೇತ್ರದ ಅಭಿವೃದ್ಧಿಗೆ ಹೊಸ ಕೊಡುಗೆ..

ಆರೋಗ್ಯ ಕ್ಷೇತ್ರದ ಅಭಿವೃದ್ಧಿಗೆ ಹೊಸ ಕೊಡುಗೆ..

ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು 2021-22ನೇ ಸಾಲಿನ ಬಜೆಟ್ನಲ್ಲಿ ಆರೋಗ್ಯ ಕ್ಷೇತ್ರದ ಅಭಿವೃದ್ಧಿಗೆ ಹೊಸ ಕೊಡುಗೆಗಳನ್ನು ಘೋಷಿಸಿದ್ದಾರೆ.

:- ಶಿವಮೊಗ್ಗದಲ್ಲಿನ ಆಯುರ್ವೇದ ಕಾಲೇಜನ್ನು ಆಯುಷ್ ವಿಶ್ವವಿದ್ಯಾಲಯವಾಗಿ ಉನ್ನತೀಕರಣ

:- 60 ಕೋಟಿ ರೂ ವೆಚ್ಚದಲ್ಲಿ  19 ಜಿಲ್ಲಾ ಆಸ್ಪತ್ರೆಗಳಲ್ಲಿ 25 ಹಾಸಿಗೆ ಹಾಗೂ 100 ತಾಲ್ಲೂಕು ಆಸ್ಪತ್ರೆಗಳಲ್ಲಿ 6 ಹಾಸಿಗೆ ಸಾಮರ್ಥ್ಯದ ಐಸಿಯು ಘಟಕಗಳ ಪ್ರಾರಂಭ

:- ದಾವಣಗೆರೆಯಲ್ಲಿ 50 ಹಾಸಿಗೆ ಸಾಮರ್ಥ್ಯದಲ್ಲಿ ಜಯದೇವ ಹೃದ್ರೋಗ ಆಸ್ಪತ್ರೆಯ ಉಪ ಕೇಂದ್ರವನ್ನು ಪ್ರಾರಂಭ. ಇದಕ್ಕಾಗಿ 50 ಕೋಟಿ ರೂ ಮೀಸಲು.

:- ರಾಜ್ಯದ 250 ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ಮಾದರಿ ಮೇಲ್ದರ್ಜೆಗೇರಿಸಲು ಕ್ರಮ

:- ಎರಡು ಕೋಟಿ ರೂ ವೆಚ್ಚದಲ್ಲಿ ನಾಲ್ಕು ಪ್ರಾದೇಶಿಕ ಆಹಾರ ಸುರಕ್ಷತಾ ಪ್ರಯೋಗಾಲಯಗಳ ಉನ್ನತೀಕರಣ

:- ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಆಂಟಿ-ಮೈಕ್ರೋಬಿಯಲ್ ರೆಸಿಸ್ಟೆನ್ಸ್ ಘಟಕ ಪ್ರಾರಂಭ

:- ರಾಜ್ಯದ ನಾಲ್ಕು ವಿಭಾಗಗಳಲ್ಲಿ ಒಟ್ಟು 2.5 ಕೋಟಿ ರೂ ವೆಚ್ಚದಲ್ಲಿ 'ತಾಯಂದಿರ ಎದೆಹಾಲಿನ ಬ್ಯಾಂಕ್' ಸ್ಥಾಪನೆ.

:-  ಗರ್ಭಿಣಿಯರಿಗೆ ಸ್ಕ್ಯಾನಿಂಗ್ ಮಾಡುವುದನ್ನು ಉತ್ತೇಜಿಸಲು 10 ಕೋಟಿ ರೂ. ವೆಚ್ಚದಲ್ಲಿ 'ಚಿಗುರು' ಕಾರ್ಯಕ್ರಮಕ್ಕೆ ಚಾಲನೆ. :-ಟೆಲಿ-ಐಸಿಯು ಬಲಪಡಿಸಲು 2 ಕೋಟಿ ರೂ ಅನುದಾನ

:- ಅಪೌಷ್ಟಿಕತೆಯಿಂದ ತಾಯಿ ಮತ್ತು ಮಗುವನ್ನು ರಕ್ಷಿಸಲು 5 ಕೋಟಿ ರೂ ವೆಚ್ಚದಲ್ಲಿ ಭಾರತೀಯ ವೈದ್ಯ ಪದ್ಧತಿ ಆಧರಿಸಿದ 'ಪೋಷಣೆ ಮತ್ತು ಜೀವನೋಪಾಯ' ಕಾರ್ಯಕ್ರಮ ಜಾರಿ

:- ಬೆಂಗಳೂರು, ಮೈಸೂರು, ಬಳ್ಳಾರಿ ಮತ್ತು ಹುಬ್ಬಳ್ಳಿ ವೈದ್ಯಕೀಯ ವಿಜ್ಞಾನ ಸಂಸ್ಥೆಗಳಲ್ಲಿ ಒಟ್ಟು ಐದು ಕೋಟಿ ರೂ ವೆಚ್ಚದಲ್ಲಿ ತುರ್ತು ವಿಭಾಗ ಪ್ರಾರಂಭ.

:- ಮೈಸೂರು ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ ಟ್ರಾಮಾ ಕೇರ್ ಕೇಂದ್ರ ಪ್ರಾರಂಭ.

:- ಶಿವಮೊಗ್ಗ ಮತ್ತು ಮೈಸೂರಿನಲ್ಲಿ 100 ಕೋಟಿ ರೂ ವೆಚ್ಚದಲ್ಲಿ ಪ್ರಾದೇಶಿಕ ಕ್ಯಾನ್ಸರ್ ಚಿಕಿತ್ಸಾ ಕೇಂದ್ರ ಸ್ಥಾಪನೆ.

:- ಮಹಿಳೆಯರಲ್ಲಿ ಕ್ಯಾನ್ಸರ್ ರೋಗ ಪತ್ತೆ ಹಚ್ಚಲು 11 ಕೋಟಿ ರೂ. ವೆಚ್ಚದಲ್ಲಿ ಸುಸಜ್ಜಿತ ಸಂಚಾರಿ ಪ್ರಯೋಗಾಲಯ ಸ್ಥಾಪನೆ.

:- ಕಲಬುರಗಿ ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ ಸುಟ್ಟಗಾಯಗಳ ಚಿಕಿತ್ಸಾ ಕೇಂದ್ರ ಮತ್ತು ಪ್ಲಾಸ್ಟಿಕ್ ಸರ್ಜರಿ ವಿಭಾಗ ಪ್ರಾರಂಭ.

:- ಚಿತ್ರದುರ್ಗ ಜಿಲ್ಲೆಯಲ್ಲಿ ಸಾರ್ವಜನಿಕ ವಿಜ್ಞಾನಗಳ ಸಂಸ್ಥೆಗಳಲ್ಲಿ ಪ್ರಸಕ್ತ ಸಾಲಿನಿಂದ 100 ಸ್ನಾತಕೋತ್ತರ ಸೀಟುಗಳ ಹೆಚ್ಚಳ.

:-ಚಿತ್ರದುರ್ಗ ಜಿಲ್ಲೆಯಲ್ಲಿ ಸಾರ್ವಜನಿಕ-ಖಾಸಗಿ ಸಹಭಾಗಿತ್ವದಡಿ ಹೊಸ ವೈದ್ಯಕೀಯ ಕಾಲೇಜು ಪ್ರಾರಂಭ.

:- ಧಾರವಾಡದ ಡಿಮ್ಹಾನ್ಸ್ ಸಂಸ್ಥೆಯನ್ನು 75 ಕೋಟಿ ರೂ ವೆಚ್ಚದಲ್ಲಿ ಮಾನಸಿಕ ನರರೋಗಿಗಳ ಸುಸಜ್ಜಿತ ಚಿಕಿತ್ಸಾ ಸಂಸ್ಥೆಯನ್ನಾಗಿ ಹಂತ ಹಂತವಾಗಿ ಮೇಲ್ದರ್ಜೆಗೇರಿಸಲಾಗುವುದು.

:- ಹಾಸನ ಮತ್ತು ಮಂಡ್ಯ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಗಳಲ್ಲಿ ಪ್ರಸಕ್ತ ಸಾಲಿನಿಂದ 100 ಸ್ನಾತಕೋತ್ತರ ಸೀಟುಗಳ ಹೆಚ್ಚಳ.

:- ಬುದ್ಧಿಮಾಂದ್ಯರ ಆರೈಕೆ ಮಾಡಲು ಅನುಕೂಲವಾಗುವಂತೆ ಶೇ.75 ಕ್ಕಿಂತ ಹೆಚ್ಚಿನ ಮನೋವೈಕಲ್ಯತೆ ಹೊಂದಿದವರಿಗೆ ನೀಡುವ ಮಾಸಾಶನ 200 ರೂ.ಗಳಿಗೆ ಹೆಚ್ಚಳ.

:- ಹುಟ್ಟಿನಿಂದಲೇ ಶ್ರವಣದೋಷವುಳ್ಳ ನಾಲ್ಕು ವರ್ಷದೊಳಗಿನ ಮಕ್ಕಳಿಗೆ ಅವರ ತಾಯಂದಿರ ಸಹಿತ ವಾಕ್ ತರಬೇತಿ ನೀಡಲು ಕ್ರಮ.

:- ಸರ್ಕಾರದ ಬ್ರೈಲ್ ಮುದ್ರಣಾಲಯದಲ್ಲಿ "ಸುಶ್ರಾವ್ಯ" ಡಿಜಿಟಲ್ ಪುಸ್ತಕಗಳ ಬ್ಯಾಂಕ್ ಸ್ಥಾಪನೆ

:- ವಿಶೇಷ ಶಾಲೆಗಳಿಗೆ ಡಿಜಿಟಲ್ ಪುಸ್ತಕ ಸರಬರಾಜಿಗೆ ಕ್ರಮ.

Enjoyed this article? Stay informed by joining our newsletter!

Comments

You must be logged in to post a comment.

About Author