ತಿಳಿಯಿರಿ ಆರೋಗ್ಯಕ್ಕೆ ಪಪ್ಪಾಯ ಹಣ್ಣಿನ ಕೊಡುಗೆ..

ಪಪ್ಪಾಯ ಸೇವಿಸುವುದರಿಂದ ಆರೋಗ್ಯಕ್ಕೆ ಏನೆಲ್ಲಾ ಲಾಭಗಳಿವೆ..?

ಪರಂಗಿ ಎಲ್ಲಾ ಸೀಸನ್ ನಲ್ಲೂ ಸುಲಭವಾಗಿ ಸಿಗುವ ಹಣ್ಣು. ಕೆಲವೊಬ್ಬರು ಮನೆಯ ಮುಂದೆಯೂ ಈ ಹಣ್ಣಿನ ಗಿಡವನ್ನು ಬೆಳೆಸಿರುವುದನ್ನು ನೋಡಿರುತ್ತೀರಿ. ಕೆಲವೊಬ್ಬರು ಈ ಹಣ್ಣು ಸಿಕ್ಕರೂ ತಿನ್ನಲು ಅಯ್ಯೋ ಬೇಡಪ್ಪಾ ಅನ್ನುತ್ತಾರೆ. ಆದರೆ ಈ ಪರಂಗಿ ಸೇವಿಸುವುದರಿಂದ ಆರೋಗ್ಯಕ್ಕೆ ಇರುವ ಪ್ರಯೋಜನಗಳನ್ನು ತಿಳಿದರೆ ಎಂದಿಗೂ ಬೇಡ ಅನ್ನೋದೆ ಇಲ್ಲ.. 

ಪರಂಗಿ ಕಾಯಿಗೆ ಕಾಳು ಮೆಣಸಿನ ಪುಡಿ, ಜೀರಿಗೆ, ಉಪ್ಪು ಮತ್ತು ನಿಂಬೆರಸ ಸೇರಿಸಿ ಸೇವಿಸುವುದರಿಂದ ಮಲಬದ್ಧತೆಯನ್ನು ಕಡಿಮೆಮಾಡಬಹುದಾಗಿದೆ. ಹೆಚ್ಚು ಸಿಹಿ ತಿನ್ನುವುದರಿಂದ ಉಂಟಾಗುವ ಜಂತುಹುಳುಗಳನ್ನು ಪಪ್ಪಾಯಿ ಸೇವಯಿಂದ ನಿಯಂತ್ರಿಸಬಹುದಾಗಿದೆ. ಅಷ್ಟೇ ಅಲ್ಲ ನರಗಳ ದೌರ್ಬಲ್ಯವನ್ನು ನಿಯಂತ್ರಿಸುವಲ್ಲಿ ಸಹಕರಿಸುತ್ತದೆ. ಮಕ್ಕಳಿಗೆ ನರದೌರ್ಬಲ್ಯ ಇದ್ದರೆ ಪಪ್ಪಾಯ ಹಣ್ಣು ,ಹಾಲು,ಜೇನುತುಪ್ಪವನ್ನು ಸೇರಿಸಿ ತಿನ್ನಿಸಿದರೆ ಈ ಸಮಸ್ಯೆಯಿಂದ ಮುಕ್ತಿ ಹೊಂದಬಹುದು.

ಪಪ್ಪಾಯಿಯಲ್ಲಿ ವಿಟಮಿನ್ ಹಾಗೂ ಖನಿಜಗಳು ಹೆಚ್ಚಿನ ಪ್ರಮಾಣದಲ್ಲಿರುತ್ತವೆ. ದೇಹಕ್ಕೆ ಕಡಿಮೆಯಾಗಿರುವ ನೀರಿನ ಅಂಶವನ್ನು ಇದು ನೀಡುವುದಲ್ಲದೆ ಅಗತ್ಯವಿರುವ ಪೋಷಕಾಂಶಗಳನ್ನು ಒದಗಿಸುತ್ತದೆ. ಪಪ್ಪಾಯದಲ್ಲಿ ಪೋಟ್ಯಾಷಿಯಂ ಅಂಶವು ಸಂಧಿವಾತ ರೋಗವನ್ನು ನಿವಾರಿಸುವಲ್ಲಿ ಸಹಕಾರಿಯಾಗಿದೆ. ಅಷ್ಟೇ ಅಲ್ಲದೆ ಇದರಲ್ಲಿರುವ “ಇ” ವಿಟಮಿನ್ ಸೌಂದರ್ಯ ವರ್ದಕ ಅಂಶ ಹೊಂದಿದ್ದು, ಚರ್ಮ ಕಾಂತಿಗೆ ಮತ್ತು ಕೂದಲಿನ ಆರೋಗ್ಯಕ್ಕೂ ತುಂಬಾ ಸಹಕಾರಿಯಾಗಿದೆ.

ದೇಹದಲ್ಲಿ ಸಾಕಷ್ಟು ಪ್ರಮಾಣದಲ್ಲಿ ಬೀಟಾ-ಕ್ಯಾರೋಟಿನ್ ಇದ್ದಲ್ಲಿ ಅಸ್ತಮಾ ಬರುವ ಸಾಧ್ಯತೆ ಕಡಿಮೆ ಇರುತ್ತದೆ. ಪಪ್ಪಾಯದಲ್ಲಿ ಬೀಟಾ-ಕ್ಯಾರೋಟಿನ್ ಅಂಶ ಹೆಚ್ಚಿರುತ್ತದೆ. ಇದು ಅಸ್ತಮಾವನ್ನು ನಿಯಂತ್ರಿಸುತ್ತದೆ. ಪಪ್ಪಾಯಿಯಲ್ಲಿ ವಿಟಮಿನ್ ಎ, ಬಿ, ಸಿ ಅಂಶವಿರುತ್ತದೆ. ಇದು ಶರೀರದಲ್ಲಿ ರೋಗ ಪ್ರತಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ. ಊಟದ ನಂತರ ಪಪ್ಪಾಯ ಸೇವನೆಯಿಂದ ಜೀರ್ಣಕ್ರಿಯೆಯನ್ನು ಸರಾಗಗೊಳಿಸಬಹುದು.

ಪಪ್ಪಾಯಿಯಲ್ಲಿ ಕ್ಯಾಲ್ಸಿಯಂ, ಮೆಗ್ನೀಸಿಯಮ್ ಮತ್ತು ತಾಮ್ರ ಹೇರಳವಾಗಿರುತ್ತದೆ. ಸಂಧಿವಾತ ಸಮಸ್ಯೆಯಿದ್ದವರು ಪಪ್ಪಾಯ ಸೇವನೆ ಮಾಡುವುದು ಬಹಳ ಮುಖ್ಯ. ಹೃದಯ ಸಂಬಂಧಿ ಖಾಯಿಲೆಗಳನ್ನು ಇದು ದೂರ ಮಾಡುತ್ತದೆ. ದೇಹದಲ್ಲಿನ ಕೊಬ್ಬಿನ ಅಂಶವನ್ನು ಕಡಿಮೆ ಮಾಡಲು ಪಪ್ಪಾಯ ತುಂಬಾ ಸಹಕಾರಿ. ಪಪ್ಪಾಯ ಸೇವನೆಯಿಂದ ರೋಗನಿರೋಧಕ ಶಕ್ತಿ ಹೆಚ್ಚುತ್ತದೆ. ಮುಧುಮೇಹವನ್ನು ನಿಯಂತ್ರಣದಲ್ಲಿಡಲು ಪಪ್ಪಾಯ ತುಂಬಾ ಸಹಕಾರಿ.ಸಂಶೋಧನೆಗಳ ಪ್ರಕಾರ ಪಪ್ಪಾಯ ಟೈಪ್ 2 ಮಧುಮೇಹವನ್ನು ನಿಯಂತ್ರಿಸಲು ಸಹಕಾರಿಯಂತೆ.

ನಿಮಗೆ ಈ ಮಾಹಿತಿ ಇಷ್ಟ ಆಗಿದ್ದರೆ ಲೈಕ್ ಮಾಡಿ.. ಶೇರ್ ಮಾಡಿ.. ನಿಮ್ಮ ಅನಿಸಿಕೆಗಳನ್ನು ಕಮೆಂಟ್ ಮೂಲಕ ತಿಳಿಸಿ..

ಇನ್ನಷ್ಟು ಮಾಹಿತಿಗಾಗಿ ಈ ಕೆಳಗಿನ ಲಿಂಕ್ ಕ್ಲಿಕ್ ಮಾಡಿ ನಮ್ಮನ್ನ ಫಾಲೋ ಮಾಡಿ..

► Subscribe to Planet Tv Kannada
https://www.youtube.com/Planet Tv Kannada

► Follow us on Facebook
https://www.facebook.com/Planettvkannada

► Follow us on Twitter
https://twitter.com/Planettvkannada​

► Follow us on Instagram
https://www.instagram.com/planettvkannada

► Follow us on Pinterest
https://www.pinterest.com/Planettvkannada

► Follow us on Koo app
https://www.kooapp.com/planettvkannada

► Follow us on share chat
https://sharechat.com/planettvkannada

► Join us on Telegram
https://t.me/planettvkannada

► Follow us on Tumblr
https://www.tumblr.com/planet-tv-kannada

 

Enjoyed this article? Stay informed by joining our newsletter!

Comments

You must be logged in to post a comment.

About Author