ಪ್ರವಾಸೋದ್ಯಮಕ್ಕೆ 500 ಕೋಟಿ ರೂ. ಮೀಸಲು

ಪ್ರವಾಸೋದ್ಯಮಕ್ಕೆ 500 ಕೋಟಿ ರೂ. ಮೀಸಲು.

ರಾಜ್ಯದ ವಿವಿಧ ಭಾಗಳಲ್ಲಿ ಪ್ರವಾಸೋದ್ಯಮವನ್ನು ಉತ್ತೇಜಿಸಿ, ಪ್ರವಾಸಿಗರನ್ನು ಆಕರ್ಷಿಸಲು 2021ನೇ ಸಾಲಿನ ಆಯ-ವ್ಯಯದಲ್ಲಿ  ಸಿಎಂ ಯಡಿಯೂರಪ್ಪ 500 ಕೋಟಿ ರೂಪಾಯಿ ಘೋಷಣೆ ಮಾಡಿದ್ದಾರೆ.

:- ಕಾವೇರಿ ನೀರಾವರಿ ನಿಗಮದ ವತಿಯಿಂದ ಮೈಸೂರಿನ ಕಬಿನಿ ಅಣೆಕಟ್ಟಿನ ಕೆಳಭಾಗದಲ್ಲಿ ಉದ್ಯಾನವನ ಅಭಿವೃದ್ಧಿಗೆ 50 ಕೋಟಿ ರೂಪಾಯಿ

:- 10 ಕೋಟಿ ರೂಪಾಯಿ ವೆಚ್ಚದಲ್ಲಿ ಉಡುಪಿಯ ತ್ರಾಸಿ, ಮರವಂತೆ, ಒತ್ತಿನೆಣೆಗಳೂ ಸೇರಿ ಇತರ ಕಡಲ ತೀರಗಳನ್ನು ಅಂತಾರಾಷ್ಟ್ರೀಯ ದರ್ಜೆಗೆ ಏರಿಕೆ

:- 10 ಕೋಟಿ ರೂಪಾಯಿಗಳಲ್ಲಿ ಉಡುಪಿಯ ಬೈಂದೂರಿನಲ್ಲಿರುವ ಸೋಮೇಶ್ವರ ಕಡಲ ತೀರದಲ್ಲಿ ಪ್ರವಾಸೋದ್ಯಮ ಅಭಿವೃದ್ಧಿ

:- ನಂದಿ ಗಿರಿಧಾಮ ಮತ್ತು ಕೆಮ್ಮಣ್ಣುಗುಂಡಿ ಗಿರಿಧಾಮಗಳ ನಿರ್ವಹಣೆ ಪ್ರವಾಸೋದ್ಯಮ ಇಲಾಖೆಗೆ ಹಸ್ತಾಂತರ

:- ನವಶಿಲಾಯುಗದಿಂದ ಕಬ್ಬಿಣ ಯುಗದ ತಾಣ ಕುಡುತಿನಿ ಆಶ್ ಮೌಂಟ್ (ಬೂದಿ ದಿಬ್ಬ) ಅಭಿವೃದ್ಧಿಗೆ 5 ಕೋಟಿ ರೂಪಾಯಿ, ಪ್ರಸಕ್ತ ಸಾಲಿನಲ್ಲಿ 2 ಕೋಟಿ ರೂಪಾಯಿ ಅನುದಾನ ಘೋಷಣೆ

:- ಚಾಮರಾಜನಗರದ ಗೋಪಿನಾಥಂ ಪ್ರದೇಶದಲ್ಲಿ 5 ಕೋಟಿ ರೂಪಾಯಿ ವೆಚ್ಚದಲ್ಲಿ ವನ್ಯಜೀವಿ ಸಫಾರಿಯನ್ನೊಳಗೊಂಡ ಪರಿಸರ ಪ್ರವಾಸೋದ್ಯಮ ಅಭಿವೃದ್ಧಿ

:- ಚಾಮರಾಜನಗರ ಜಿಲ್ಲೆಯ ಬೂದಿಪಡಗದಲ್ಲಿ 1 ಕೋಟಿ ರೂಪಾಯಿ ವೆಚ್ಚದಲ್ಲಿ ಆನೆ ಶಿಬಿರ

:- ಸೋಮೇಶ್ವರ ಕಡಲ ತೀರದಲ್ಲಿ ಪ್ರವಾಸೋದ್ಯಮ ಅಭಿವೃದ್ಧಿಗೆ 10 ಕೋಟಿ ರೂಪಾಯಿ

:- ಜೈನ ಪುಣ್ಯ ಕ್ಷೇತ್ರಗಳ ಅಭಿವೃದ್ಧಿಗೆ 50 ಕೋಟಿ ರೂಪಾಯಿ ಅನುದಾನ.

Enjoyed this article? Stay informed by joining our newsletter!

Comments

You must be logged in to post a comment.

About Author