ಮಠಗಳ ಅಭಿವೃದ್ಧಿಗೆ ಮೀಸಲಿಟ್ಟ ಹಣವೆಷ್ಟು..?

ಮಠಗಳ ಅಭಿವೃದ್ಧಿಗೆ ಮೀಸಲಿಟ್ಟ ಹಣವೆಷ್ಟು..?

2021-2022 ನೇ ಸಾಲಿನ ಆಯವ್ಯಯದಲ್ಲಿ ವಿವಿಧ ಧರ್ಮಗಳ, ಮಠ ಮಾನ್ಯಗಳ ಸರ್ವತೋಮುಖ ಅಭಿವೃದ್ಧಿಗಾಗಿ ಹಾಗೂ ಹಿಂದುಳಿದ ಸಮುದಾಯಗಳ ಅಭಿವೃದ್ಧಿಗೆ ಬಿ.ಎಸ್ ಯಡಿಯೂರಪ್ಪ ಅನುದಾನ ಪ್ರಕಟಿಸಿದ್ದಾರೆ.

:- ಕ್ರೈಸ್ತ ಸಮುದಾಯದ ಅಭಿವೃದ್ಧಿಗೆ 200 ಕೋಟಿ ರೂ.

:- ಕ್ರೈಸ್ತ ಸಮುದಾಯದ ಅಲ್ಪಸಂಖ್ಯಾತರಿಗೆ 1,500 ಕೋಟಿ ರೂ. ಮೀಸಲು

:- ವೀರಶೈವ ಲಿಂಗಾಯತ ಅಭಿವೃದ್ಧಿಗೆ 500 ಕೋಟಿ ರೂ.

:- ಅಂತೆಯೇ ಒಕ್ಕಲಿಗರ ಅಭಿವೃದ್ಧಿಗೆ ನಿಗಮ ಸ್ಥಾಪಿಸಿ, 500 ಕೋಟಿ :- ರೂಪಾಯಿ ಮೀಸಲು

:- ಬ್ರಾಹ್ಮಣ ಅಭಿವೃದ್ಧಿ ಮಂಡಳಿಗೆ 50 ಕೋಟಿ

:- ಆದಿಚುಂಚನಗಿರಿ ನಾಥ ಪಾರಂಪರಿಕ ಕೇಂದ್ರಕ್ಕೆ ರೂ. 10 ಕೋಟಿ,

:- ಅಯೋಧ್ಯೆಯ ಶ್ರೀರಾಮಜನ್ಮಭೂಮಿಯಲ್ಲಿ ಕರ್ನಾಟಕ ಯಾತ್ರಿ ನಿವಾಸ ನಿರ್ಮಾಣಕ್ಕೆ ರೂ.10 ಕೋಟಿ ಅನುದಾನ

:- ಕಿತ್ತೂರು ಅಭಿವೃದ್ಧಿ ಪ್ರಾಧಿಕಾರಕ್ಕೆ 50 ಕೋಟಿ ರೂ.

:- ಬಸವನ ಬಾಗೇವಾಡಿಯಲ್ಲಿ ಜಗಜ್ಯೋತಿ ಬಸವಣ್ಣ ಜನ್ಮಸ್ಥಳ ಅಭಿವೃದ್ಧಿಗಾಗಿ ರೂ. 5 ಕೋಟಿ

:- ಸಿದ್ದಗಂಗಾ ಮಠದ ಶ್ರೀ ಶಿವಕುಮಾರ್ ಶ್ರೀಗಳು ಹಾಗೂ ಪೇಜಾವರ ಮಠದ ವಿಶ್ವೇಶ ತೀರ್ಥ ಶ್ರೀಗಳ ಸ್ಮೃತಿವನಕ್ಕಾಗಿ ರೂ. 2 ಕೋಟಿ ಅನುದಾನ

:- ಜೈನ ಪುಣ್ಯ ಕ್ಷೇತ್ರಗಳ ಅಭಿವೃದ್ಧಿಗೆ 50 ಕೋಟಿ ರೂಪಾಯಿ ಅನುದಾನ.

Enjoyed this article? Stay informed by joining our newsletter!

Comments

You must be logged in to post a comment.

About Author