ಅಂಬೇಡ್ಕರ್ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರ ಮರುನೇಮಕಕ್ಕೆ ಅಂಬೇಡ್ಕರ್ ಸೇನೆ ಆಗ್ರಹ.
ತುಮಕೂರು ಜಿಲ್ಲೆಯ ಅಂಬೇಡ್ಕರ್ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರಾಗಿದ್ದ ಸರೋಜಾದೇವಿ ಅವರನ್ನು ಮರುನೇಮಕ ಮಾಡಬೇಕೆಂದು ಒತ್ತಾಯಿಸಿ ಅಂಬೇಡ್ಕರ್ ಸೇನೆ ತುಮಕೂರು ನಗರದಲ್ಲಿ ಪ್ರತಿಭಟನೆ ನಡೆಸಿತು.
ಇದೇ ಸಂದರ್ಭದಲ್ಲಿ ಮಾತನಾಡಿದ ಅಂಬೇಡ್ಕರ್ ಸೇನೆಯ ಜಿಲ್ಲಾಅಧ್ಯಕ್ಷರಾದ ಉರ್ಡಿಗೆರೆ ಕೆಂಪರಾಜುರವರು ಮಾತನಾಡಿ ಸರೋಜಾದೇವಿ ರವರು ತುಮಕೂರಿನ ಅಂಬೇಡ್ಕರ್ ಅಭಿವೃದ್ಧಿ ನಿಗಮ ದಲ್ಲಿ ಪ್ರಾಮಾಣಿಕವಾಗಿ ಸೇವೆ ಸಲ್ಲಿಸುತ್ತಿದ್ದಾರೆ ಇಂತಹ ದಕ್ಷ ಹಾಗೂ ಪ್ರಾಮಾಣಿಕ ಅಧಿಕಾರಿಗಳನ್ನು ಜಿಲ್ಲಾಧಿಕಾರಿಗಳು ಬೇರೆಡೆಗೆ ವರ್ಗಾವಣೆ ಮಾಡಿ ಅದೇ ಸ್ಥಳಕ್ಕೆ ಮತ್ತೊಬ್ಬ ಅಧಿಕಾರಿಯನ್ನು ನೇಮಕ ಮಾಡಿ ಆದೇಶ ಮಾಡಿರುವುದು ತಪ್ಪು ನಿರ್ಧಾರ ಕೂಡಲೇ ಅವರನ್ನು ಅಂಬೇಡ್ಕರ್ ಅಭಿವೃದ್ಧಿ ನಿಗಮ ದಲ್ಲಿ ಮರುನೇಮಕ ಮಾಡಿ ಮುಂದುವರಿಸಬೇಕು ಎಂದು ಆಗ್ರಹಿಸಿದರು.
ಇನ್ನು ಅಂಬೇಡ್ಕರ್ ಅಭಿವೃದ್ಧಿ ನಿಗಮದಲ್ಲಿ ಸರೋಜಾದೇವಿ ರವರು ಅಧಿಕಾರ ವಹಿಸಿಕೊಳ್ಳುವ ಮುಂಚೆ ಕೆಲಸ ನಿರ್ವಹಿಸಿದ ಜಿಲ್ಲಾ ವ್ಯವಸ್ಥಾಪಕರಾಗಿ ಹಾಗೂ ಇತರೆ ಅಧಿಕಾರಿಗಳ ವಿರುದ್ಧ ಸಾಕಷ್ಟು ಆರೋಪಗಳು ಕೇಳಿಬಂದಿದ್ದು ಸಾಕಷ್ಟು ಹಗರಣಗಳು ಸಹ ಬಯಲಿಗೆ ಬಂದಿದ್ದವು ಆದರೆ ಅಂತಹ ಸಂದರ್ಭದಲ್ಲಿ ಅಧಿಕಾರವಹಿಸಿಕೊಂಡ ಸರೋಜಾದೇವಿ ರವರು ಉತ್ತಮ ಹಾಗೂ ದಕ್ಷ ಪ್ರಾಮಾಣಿಕ ವಾಗಿ ಕೆಲಸವನ್ನು ನಿರ್ವಹಿಸುವ ಮೂಲಕ ಅಂಬೇಡ್ಕರ್ ಅಭಿವೃದ್ಧಿ ನಿಗಮದ ಏಳಿಗೆಗೆ ಶ್ರಮಿಸಿದ್ದಾರೆ ಹಾಗಾಗಿ ಇಂತಹ ಉತ್ತಮ ಅಧಿಕಾರಿಯನ್ನು ಮತ್ತೆ ತುಮಕೂರಿನ ಅಂಬೇಡ್ಕರ್ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕ ಮುಂದುವರಿಸಬೇಕು ಎಂದು ಒತ್ತಾಯಿಸಿದರು .
ಇದೇ ಸಂದರ್ಭದಲ್ಲಿ ತುಮಕೂರಿನ ಟೌನ್ಹಾಲ್ ವೃತ್ತದಿಂದ ಜಿಲ್ಲಾಧಿಕಾರಿಗಳ ಕಚೇರಿ ವರೆಗೆ ಮೆರವಣಿಗೆ ಮೂಲಕ ತೆರಳಿ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.
ಇದೇ ಸಂದರ್ಭದಲ್ಲಿ ಅಂಬೇಡ್ಕರ್ ಸೇನೆಯ ಪದಾಧಿಕಾರಿಗಳಾದ ರಮೇಶ್ ,ಮಂಜುನಾಥ್ ,ಶಿವಣ್ಣ ,ಮಾರುತಿ ,ಆಂಜನಪ್ಪ ಸೇರಿದಂತೆ ಅಂಬೇಡ್ಕರ್ ಸೇನೆಯ ಪದಾಧಿಕಾರಿಗಳು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು
You must be logged in to post a comment.