ಬಿಪಿನ್ ರಾವತ್ ಮತ್ತು ಇತರರಿಗೆ ಮೊದಲು ತಮಿಳುನಾಡಿನಲ್ಲಿ ಗೌರವ ನಮನ

ಯಾರೂ ಉಹಿಸಲಾಗದಂತ ಅತ್ಯಂತ ಕೆಟ್ಟ ದುರ್ವಿಧಿಯಲ್ಲಿ ದೇಶ ರಕ್ಷಣಾ ಮುಖ್ಯಸ್ಥ ಬಿಪಿನ್​ ರಾವತ್ ಸೇರಿದಂತೆ 12 ಮಂದಿಯನ್ನು ಕಳೆದುಕೊಂಡಿದೆ. ತಮಿಳುನಾಡಿನ ಕುನೂರ್​​ನಲ್ಲಿ ನಿನ್ನೆ ಮಧ್ಯಾಹ್ನ ನಡೆದ ಸೇನಾ ಹೆಲಿಕಾಪ್ಟರ್​ ದುರಂತದಲ್ಲಿ ಸೇನಾ ಸಿಬ್ಬಂದಿ ಮುಖ್ಯಸ್ಥ (CDS) ಬಿಪಿನ್​ ರಾವತ್ (Bipin Rawat) ಮೃತಪಟ್ಟಿದ್ದಾರೆ. ಒಬ್ಬರು ಮಾತ್ರ ಪವಾಡಸದೃಶ ರೀತಿಯಲ್ಲಿ ಗಂಭೀರವಾಗಿ ಗಾಯಗೊಂಡು ಜೀವನ್ಮರಣದ ನಡುವೆ ಹೋರಾಡುತ್ತಿದ್ದಾರೆ.  ಚಾಪರ್ ಅಪಘಾತದಲ್ಲಿ ದುರ್ಮರಣವನ್ನಪ್ಪಿರುವ ಬಿಪಿನ್ ರಾವತ್ ಅಂತ್ಯಕ್ರಿಯೆ ನಾಳೆ ದೆಹಲಿ ಕಂಟೋನ್ಮೆಂಟ್‌ ಪ್ರದೇಶದಲ್ಲಿ ನಡೆಯಲಿದೆ. ಇಂದು ಸಂಜೆ ಬಿಪಿನ್‌ ರಾವತ್ ಹಾಗೂ ಪತ್ನಿ ಮಧುಲಿಕಾ ಪಾರ್ಥಿವ ಶರೀರವನ್ನು ದೆಹಲಿಗೆ ಶಿಫ್ಟ್‌ ಮಾಡಲಿದ್ದಾರೆ.ನಾಳೆ ಬೆಳಗ್ಗೆ 11ರಿಂದ ಮಧ್ಯಾಹ್ನ 2ರವರೆಗೆ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಸಿಡಿಎಸ್‌ ಬಿಪಿನ್‌ ರಾವತ್‌, ಪತ್ನಿ ಅಂತಿಮ ದರ್ಶನಕ್ಕೆ ಅವಕಾಶ ಮಾಡಲಾಗುವ ಬಗ್ಗೆ ಮಾಹಿತಿ ನೀಡಲಾಗಿದೆ.

ಇದಕ್ಕೂ ಮುನ್ನ ಬಿಪಿನ್​ ರಾವತ್​ ಮತ್ತು ಇತರರಿಗೆ ಮೊದಲು ತಮಿಳುನಾಡಿನಲ್ಲಿ ಗೌರವ ನಮನ ಸಲ್ಲಿಸಲಾಗುತ್ತೆ. ಬೆಳಗ್ಗೆ ಬೆಳಿಗ್ಗೆ 10ರಿಂದ 11ರವೇಳೆಗೆ ವೆಲ್ಲಿಂಗ್ಟನ್ ಕ್ಯಾಂಪ್ ನಲ್ಲಿ ಗೌರವ ನಮನ ಸಲ್ಲಿಸಲಾಗುತ್ತೆ. ಇದಾದ ಬಳಿಕ ಪಾರ್ಥಿವ ಶರೀರಗಳನ್ನು ದೆಹಲಿಗೆ ರವಾನೆ ಮಾಡಲಾಗುತ್ತೆ ಸಂತ ತಮಿಳುನಾಡು ಸರ್ಕಾರ ತಿಳಿಸಿದೆ. ತಮಿಳುನಾಡು ಸರ್ಕಾರದ ಪರವಾಗಿ ಸಿಎಂ ಸ್ಟಾಲಿನ್ ಅವರಿಂದ ಗೌರವ ನಮನ ಸಲ್ಲಿಸಲಿದ್ದಾರೆ. ಮಧ್ಯಾಹ್ನ 12 ಗಂಟೆಗೆ ಸೂಲೂರು ವಾಯುನೆಲೆಯಿಂದ ಪಾರ್ಥೀವ ಶರೀರ ದೆಹಲಿಗೆ ರವಾನೆಯಾಗಲಿದೆ.  ಸಂಜೆ 4 ಗಂಟೆ ವೇಳೆಗೆ ದೆಹಲಿ ಪಾರ್ಥೀವ ಶರೀರಗಳು ತಲುಪಲಿದೆ.  ಬಳಿಕ ಕುಟುಂಬದವರಿಗೆ ಪಾರ್ಥೀವ ಶರೀರಗಳ ಹಸ್ತಾಂತರ ಮಾಡಲಾಗುತ್ತೆ.

ನಾಳೆ ಸಂಜೆ ಅಂತ್ಯಕ್ರಿಯೆ

ಬಿಪಿನ್​ ರಾವತ್​ ಅವರನ್ನು ಮೆರವಣಿಗೆ ಮೂಲಕ ಕರೆದುಕೊಂಡು ಹೋಗಿ ಅಂತ್ಯಕ್ರಿಯೆ ನೇರವೇರಿಸಲಾಗುತ್ತೆ. ಬಿಪಿನ್‌ ನಿವಾಸ ಕಾಮರಾಜ್‌ ಮಾರ್ಗದಿಂದ ಮೆರವಣಿಗೆ ಶುರು ಆಗಲಿದೆ. ಬ್ರಾರ್ ಸ್ಕ್ವೇರ್ ಸ್ಮಶಾನದವರೆಗೆ ಮೆರವಣಿಗೆ ನಡೆಯಲಿದೆ. ನಾಳೆ ಸಂಜೆ ಬ್ರಾರ್ ಸ್ಕ್ವೇರ್ ಚಿತಾಗಾರದಲ್ಲಿ ಅಂತ್ಯಕ್ರಿಯೆ ನಡೆಯಲಿದೆ. ದೆಹಲಿಯ ಕಂಟೋನ್ಮೆಂಟ್‌ ಪ್ರದೇಶದಲ್ಲಿರುವ ಚಿತಾಗಾರದಲ್ಲಿ ಅಂತಿಮ ವಿಧಿವಿಧಾನ ನಡೆಯಲಿದೆ.ಹೆಲಿಕಾಪ್ಟರ್​ ದುರಂತದ ಬಗ್ಗೆ ಸಂಸತ್​ನಲ್ಲಿ ಇಂದು ವಿವರಣೆ ನೀಡಲಾಗುವ ಬಗ್ಗೆ ತಿಳಿಸಲಾಗಿದೆ. ಲೋಕಸಭೆ, ರಾಜ್ಯಸಭೆಯಲ್ಲಿ ವಿವರಣೆ ನೀಡಲಿರುವ ರಕ್ಷಣಾ ಸಚಿವ ರಾಜನಾಥ್ ಸಿಂಗ್​ ಇಂದು ವಿವರಣೆ ನೀಡಲಿದ್ದಾರೆ.

Enjoyed this article? Stay informed by joining our newsletter!

Comments

You must be logged in to post a comment.

Related Articles
About Author

A passionate Creator