ಜೆ.ಡಿ.ಎಸ್ ಅಭ್ಯರ್ಥಿಯಾದ ಎಚ್.ಎಂ ರಮೇಶ್ ಗೌಡ ಪರ ಮತಯಾಚನೆ ಮಾಡಿದ ದೇವೇಗೌಡ

ಬೆಂಗಳೂರು: ವಿಧಾನಪರಿಷತ್ ಚುನಾವಣೆ ಕಾವು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು ಹಲವು ಪಕ್ಷದ ಮುಖಂಡರು ಮತದಾರರನ್ನು ಸೆಳೆಯುವ ಪ್ರಯತ್ನ ಮಾಡುತ್ತಿದ್ದಾರೆ.

ಚುನಾವಣೆ  ಹಿನ್ನೆಲೆಯಲ್ಲಿ ಮಾಜಿ ಪ್ರಧಾನಿಗಳು,ಪಕ್ಷದ ರಾಷ್ಟ್ರೀಯ ಅದ್ಯಕ್ಷರಾದ ಸನ್ಮಾನ್ಯ ಶ್ರೀ ಹೆಚ್.ಡಿ.ದೇವೇಗೌಡರು ದೇವನಹಳ್ಳಿಯಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ವಿಧಾನಪರಿಷತ್ ಕ್ಷೇತ್ರದ ಜೆ.ಡಿ.ಎಸ್ ಅಭ್ಯರ್ಥಿಯಾದ ಎಚ್.ಎಂ ರಮೇಶ್ ಗೌಡ ಅವರ ಪರ ಮತಯಾಚನೆ ಮಾಡಿದರು.

ಈ ಸಂದರ್ಭದಲ್ಲಿ ಜಿಲ್ಲಾಧ್ಯಕ್ಷರಾದ ಶ್ರೀ ಬಿ.ಮುನೇಗೌಡ ,ತಾಲ್ಲೂಕು ಅಧ್ಯಕ್ಷರಾದ ಆರ್.ಮುನೇಗೌಡ ಅವರು, ದೇವನಹಳ್ಳಿ ಭಾಗದ ಪಕ್ಷದ ಮುಖಂಡರುಗಳು, ಚುನಾಯಿತ ಪ್ರತಿನಿಧಿಗಳು, ಕಾರ್ಯಕರ್ತರು ಉಪಸ್ಥಿತರಿದ್ದರು.

Enjoyed this article? Stay informed by joining our newsletter!

Comments

You must be logged in to post a comment.

Related Articles
About Author

I am published all type of Kannada news