ಮೈಸೂರು: ಗ್ರಾಮಾಂತರ ಪ್ರದೇಶಗಳಲ್ಲಿನ ಸರ್ಕಾರಿ ಶಾಲೆಗಳು ಫಲಿತಾಂಶದಲ್ಲಿ ಖಾಸಗಿ ಶಾಲೆಗಳಿಗೆ ಪೈಪೋಟಿ ನೀಡುತ್ತಿರುವುದು ಶ್ಲಾಘನೀಯ ಎಂದು ಮೈಸೂರಿನ ವಕೀಲ ಎಸ್.ವಿಶ್ವರಾಧ್ಯ ಹೇಳಿದರು. ಗುರುವಾರ ಮೈಸೂರು ಜಿಲ್ಲೆಯ ತಾಲೂಕಿನ ಬೆಕ್ಕರೆ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು, ಈ ಹಿಂದೆ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಸ್ಮಾರ್ಟ್ ಕ್ಲಾಸ್ ಯೋಜನೆ ದಾನಿಗಳು ಹಾಗೂ ಹಿರಿಯ ವಿದ್ಯಾರ್ಥಿಗಳ ಸಹಕಾರದಿಂದ ಗ್ರಾಮಾಂತರ ಪ್ರದೇಶಗಳ ಶಾಲೆಗಳಲ್ಲಿಯೂ ಜಾರಿಗೆ ಬಂದಿರುವುದರಿಂದ ವಿದ್ಯಾರ್ಥಿಗಳ ಕಲಿಕೆಗೆ ಪೂರಕ ವಾತಾವರಣ ನಿರ್ಮಾಣವಾದಂತಾಗಿದೆ ಎಂದರು. ಪಟ್ಟಣದ ಅಕ್ಷರಾತ್ಮ ಫೌಂಡೇಶನ್ ನ ಸಿಸ್ಟರ್ ನಿರ್ಮಲಾ ಮೆಂಡೋನ್ಸಾ ಅವರು ಮಾತನಾಡಿ ವಿದ್ಯಾರ್ಥಿ ಜೀವನದಲ್ಲಿ ಕಲಿಕೆಗೆ ಹೆಚ್ಚು ಒತ್ತು ನೀಡಿ ಸಮಾಜದಲ್ಲಿ ಮಾದರಿ ವ್ಯಕ್ತಿಗಳಾಗಿ ರೂಪುಗೊಂಡು ಪೋಷಕರು ಹಾಗೂ ಶಿಕ್ಷಕರಿಗೆ ಉತ್ತಮ ಹೆಸರು ತರುವ ನಿಟ್ಟಿನಲ್ಲಿ ಅಭ್ಯಾಸ ಮಾಡುವಂತೆ ತಿಳಿಸಿದರು.
You must be logged in to post a comment.