ಕೊಪ್ಪಳ ಜಿಲ್ಲೆಯ, ಹುಲಗಿ ಶ್ರೀ ಹುಲಿಗೆಮ್ಮದೇವಿ ದೇವಸ್ಥಾನಕ್ಕೆ ಭೇಟಿ ನೀಡಿದ ಸಚಿವೆ ಶಶಿಕಲಾ ಜೊಲ್ಲೆಯವರು.

ಇಂದು ಕೊಪ್ಪಳ ಜಿಲ್ಲೆಯ, ಹುಲಗಿ ಶ್ರೀ ಹುಲಿಗೆಮ್ಮದೇವಿ ದೇವಸ್ಥಾನಕ್ಕೆ ಭೇಟಿ ನೀಡಿ, ದೇವರ ದರ್ಶನ ಪಡೆದು, ವಿಶೇಷ ಪೂಜೆ ಸಲ್ಲಿಸಿ, ಸರ್ವರಿಗೂ ಸುಖ, ಶಾಂತಿ, ನೆಮ್ಮದಿ ನೀಡಲಿ ಎಂದು ಪ್ರಾರ್ಥಿಸಿದ ಸಚಿವೆ ಶಶಿಕಲಾ ಜೊಲ್ಲೆಯವರು. ತುಂಗಾ ಭದ್ರಾ ತೀರದಲ್ಲಿ ನೆಲೆಸಿರುವ ಹುಲಿಗೆಮ್ಮ ದೇಗುಲಕ್ಕೆ ಸುಮಾರು ಎಂಟು ನೂರು ವರ್ಷಗಳ ಇತಿಹಾಸವಿದೆ. ಹುಲಿಗೆಮ್ಮನ ದೇವಸ್ಥಾನದ ಮುಂದೆ ಮಾತಂಗಿ, ಪರಶುರಾಮ, ಸುಬ್ರಹ್ಮಣ್ಯ, ಪಾರ್ವತಿ, ಗಣಪತಿ, ನವಗ್ರಹಗಳ ಗುಡಿಗಳಿವೆ. ಸುಮಾರು 13 ನೆಯ ಶತಮಾನಕ್ಕೆ ಸೇರಿದ ದೇವಸ್ಥಾನ ಇದಾಗಿದ್ದು, ಶಕ್ತಿ ದೇವತೆಯ ಸ್ಥಳಕ್ಕೆ ರಾಜ್ಯ, ಹೊರರಾಜ್ಯಗಳಿಂದ ಭಕ್ತರು ಆಗಮಿಸುತ್ತಾರೆ. ರೇಣುಕಾಂಬ ದೇವಿಯೇ ಭಕ್ತರ ಕೋರಿಕೆಗಳನ್ನು ಈಡೇರಿಸಲು ಹುಲಿಗೆಮ್ಮಳಾಗಿ ನೆಲೆಸಿದ್ದಾಳೆ ಎಂಬ ಪ್ರತೀತಿಯಿದೆ. 

Enjoyed this article? Stay informed by joining our newsletter!

Comments

You must be logged in to post a comment.

About Author