ಹೊಸಪೇಟೆ ನಗರದ ಟಿಎಸ್ಪಿ ಆವರಣದಲ್ಲಿ ನವೀಕರಿಸಲಾಗಿರುವ ನೂತನ ಜಿಲ್ಲಾಧಿಕಾರಿಗಳ ಕಚೇರಿ ಕಟ್ಟಡಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿದ ಸಚಿವೆ ಶಶಿಕಲಾ ಜೊಲ್ಲೆಯವರು ಈ ಕಟ್ಟಡದಲ್ಲಿ ಜಿಲ್ಲಾಧಿಕಾರಿಗಳ ಕಚೇರಿ ಮತ್ತು ಜಿ.ಪಂ ಸಿಇಒ ಕಚೇರಿ ಕಾರ್ಯನಿರ್ವಹಿಸಲಿವೆ. ಇವುಗಳ ಜತೆಗೆ ಇನ್ನೂ ಕೆಲ ಕಚೇರಿಗಳು ಕಾರ್ಯನಿರ್ವಹಿಸಲಿವೆ ಎಂದು ಅಧಿಕಾರಿಗಳಿಂದ ಮಾಹಿತಿ ಪಡೆದರು.ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಶ್ರೀ ಅನಿರುದ್ಧ ಶ್ರವಣ್, ಜಿಪಂ ಸಿಇಒ ಶ್ರೀ ಭೋಯರ್ ಹರ್ಷಲ್ ನಾರಾಯಣ, ಎಸ್ಪಿ ಡಾ.ಅರುಣ, ಅಪರ ಜಿಲ್ಲಾಧಿಕಾರಿ ಶ್ರೀ ಮಹೇಶಬಾಬು ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾಮಟ್ಟದ ಅಧಿಕಾರಿಗಳು ಹಾಜರಿದ್ದರು.
You must be logged in to post a comment.