ಬೆಂಗಳೂರಿನಲ್ಲಿ ಎಮ್‍ಎಸ್ ಧೋನಿ ಕ್ರಿಕೆಟ್ ಅಕಾಡೆಮಿ ಪ್ರಾರಂಭ

 

ms dhoni cricket academy bangalore

Image Source : mykhel.com

ನಿಮ್ಮ ಮಗುವಿಗೆ ಧೋನಿ ಮಾದರಿಯ ತರಬೇತಿ ನೀಡಿ 

ಮಾಹಿ ರೀತಿಯಲ್ಲಿ ಕ್ರಿಕೆಟ್ ಆಡಿ 

ಚಾಂಪಿಯನ್‍ಗಳನ್ನು ಸೃಷ್ಟಿಸುವ ಅಕಾಡೆಮಿಯ ಭಾಗವಾಗಿರಿ 

ಬೆಂಗಳೂರಿನಲ್ಲಿರುವ ಉದಯೋನ್ಮುಖ ಕ್ರಿಕೆಟ್ ಆಟಗಾರರಿಗೆ ಇಲ್ಲಿದೆ ಒಂದು ಒಳ್ಳೆಯ ಸುದ್ದಿ. ಇಂದು  ನಡೆದ ಪತ್ರಿಕಾಗೋಷ್ಠಿಯಲ್ಲಿ, ಗೇಮ್‍ಪ್ಲೇ ಮತ್ತು ಆರ್ಕಾ ಸ್ಪೋಟ್ರ್ಸ್, ಎಂ.ಎಸ್. ಧೋನಿ ಕ್ರಿಕೆಟ್ ಅಕಾಡೆಮಿ (MSDCA)ಯನ್ನು  ಬೆಂಗಳೂರಿನಲ್ಲಿ ಆರಂಭವಾಗಿದೆ ಎಂದು ಪ್ರಕಟಿಸಿದರು. 

ಅತ್ಯಾಧುನಿಕ ಮೂಲಸೌಕರ್ಯ ಮತ್ತು ವಿಶ್ವ ದರ್ಜೆಯ ತರಬೇತಿ ಸೌಲಭ್ಯಗಳನ್ನು ಹೊಂದಿರುವ ಬೆಂಗಳೂರಿನ ಎಂ ಎಸ್ ಡಿ ಸಿ ಎ  (MSDCA) ಯಲ್ಲಿ ತರಬೇತಿ ಪಡೆಯುವವರಿಗೆ ಭಾರತೀಯ ಕ್ರಿಕೆಟ್ ಕಂಡ ಶ್ರೇಷ್ಠ ನಾಯಕ ಶ್ರೀ ಮಹೇಂದ್ರ ಸಿಂಗ್ ಧೋನಿ ಮಾರ್ಗದರ್ಶನ  ನೀಡಲಿದ್ದಾರೆ. 

ಎಂಎಸ್‍ಡಿಸಿಎ ಮಾರ್ಗದರ್ಶಕರಾದ ಶ್ರೀ ಎಂ.ಎಸ್. ಧೋನಿ ಪ್ರತಿಕ್ರಿಯಿಸಿ, “ಎಂಎಸ್ ಧೋನಿ ಅಕಾಡೆಮಿ ಪ್ರಾರಂಭಿಸಲು ತುಂಬಾ  ಉತ್ಸುಕನಾಗಿದ್ದೇನೆ. ಧೋನಿ ಕ್ರಿಕೆಟ್ ಅಕಾಡೆಮಿ ನಿಮ್ಮ ಕೌಶಲ್ಯಗಳನ್ನು ಚುರುಕುಗೊಳಿಸಲು ಉತ್ತಮ ತಂತ್ರಗಳು ಮತ್ತು ತಂತ್ರಜ್ಞಾನದ  ಸಹಾಯದಿಂದ 360 ಡಿಗ್ರಿ ತರಬೇತಿ ವಿಧಾನವನ್ನು ಒದಗಿಸುವುದು ಅಕಾಡೆಮಿಯ ಗುರಿಯಾಗಿದೆ. ನಾವು ಅರ್ಹ ತರಬೇತುದಾರರು ಮತ್ತು  ಫಿಟ್ನೆಸ್ ತಜ್ಞರನ್ನು ಕರೆತರುತ್ತೇವೆ. ಈಗಲೇ ನೋಂದಾಯಿಸಿ ಮತ್ತು ನನ್ನ ಅಕಾಡೆಮಿಯ ಭಾಗವಾಗಲು ಸಿದ್ಧರಾಗಿ. ಇದು ಕೇವಲ ಕ್ರಿಕೆಟರ್  ಆಗಲು ಅಷ್ಟೇ ಅಲ್ಲ; ಇದು ಚತುರತೆಯುಳ್ಳವರಾಗಲು ಕೂಡಾ. ಆಟದ ಮಾನಸಿಕ ಮತ್ತು ದೈಹಿಕ ಕೌಶಲ್ಯಗಳನ್ನು ಕಲಿಯಲು ಧೋನಿ ಕ್ರಿಕೆಟ್  ಅಕಾಡೆಮಿಯಲ್ಲಿ ನಮ್ಮೊಂದಿಗೆ ಸೇರಿಕೊಳ್ಳಲು ಬನ್ನಿ.'' 

ms dhoni cricket academy bangalore registration

Image Source : msdcaindia.com

ಕ್ರಿಕೆಟ್‍ನಲ್ಲಿ ಆಸಕ್ತಿ ಹೊಂದಿರುವವರರಿಗೆ ಶ್ರೀ ಎಂ.ಎಸ್. ಧೋನಿ ಪ್ರಕ್ರಿಯೆಯ ಮೇಲೆ ಗಮನ ಕೊಡಿ ಎಂಬ ಸಲಹೆ ನೀಡಿದ್ದಾರೆ. 

“ನನ್ನ ಒಂದೇ ಒಂದು ಸಲಹೆ ಎಂದರೆ, ಫಲಿತಾಂಶಕ್ಕಿಂತ ಹೆಚ್ಚು ಪ್ರಕ್ರಿಯೆ ಮುಖ್ಯವಾದುದು. ಫಲಿತಾಂಶವು ನಮ್ಮ ಪ್ರಕ್ರಿಯೆಯ ಫಲ ಅಷ್ಟೆ.  ಆದರೆ, ಇಂದಿನ ಜಗತ್ತಿನಲ್ಲಿ ನಾವು ಪ್ರಕ್ರಿಯೆಗಿಂತ ಹೆಚ್ಚಾಗಿ ಫಲಿತಾಂಶದ ಬಗ್ಗೆ ಹೆಚ್ಚು ಗಮನಹರಿಸುತ್ತಿದ್ದೇವೆ. ಆದ್ದರಿಂದ, ಪ್ರಕ್ರಿಯೆಯ ಮೇಲೆ  ಗಮನ ಕೊಡಿ, ಎಲ್ಲಾ ಸಣ್ಣ ವಿಷಯಗಳನ್ನು ನೋಡಿಕೊಳ್ಳಿ ಮತ್ತು ಇದರಿಂದ ಅಂತಿಮವಾಗಿ ನೀವು ಬಯಸಿದ ಫಲಿತಾಂಶವನ್ನು  ಪಡೆಯುತ್ತೀರಿ. ನಾವು ಇನ್ನೂ ಹೆಚ್ಚಿನದನ್ನು ಪಡೆಯಬೇಕಾಗಿತ್ತು ಎಂದು ದೂರುತ್ತಲೇ ಇರುತ್ತೇವೆ. ಆದರೆ ವಾಸ್ತವವಾಗಿ, ನಾವು ಏನು  ಮಾಡಿದ್ದೇವೆ ಎಂಬುದರ ಫಲವೇ ನಮಗೆ ಸಿಗುವ ಫಲಿತಾಂಶವಾಗಿರುತ್ತದೆ. ಆದ್ದರಿಂದ, ನಾವು ಚೆನ್ನಾಗಿ ತಯಾರಾದರೆ, ಯೋಜನೆಗಳನ್ನು  ಕಾರ್ಯರೂಪಕ್ಕೆ ತಂದರೆ ಹಾಗೂ ನಾವು ನಮಗೇ ಪ್ರಾಮಾಣ ಕರಾಗಿದ್ದರೆ, ನಾವು ಬಯಸಿದ ಫಲಿತಾಂಶವನ್ನು ಪಡೆಯುತ್ತೇವೆ. ಒಂದು ವೇಳೆ  ಅಲ್ಲಿ ಯಾವುದೇ ನ್ಯೂನತೆಯಿದ್ದರೆ, ಅದು ನಮ್ಮ ಮುಂದಿನ ಕಲಿಕೆಯಾಗಿರುತ್ತದೆ. ಆಲ್ ದಿ ಬೆಸ್ಟ್” ಎಂದು ಶ್ರೀಎಂ.ಎಸ್. ಧೋನಿ  ಹೇಳಿದರು.

 

ಗೇಮ್‍ಪ್ಲೇ ಮಾಲೀಕರಾದ ಶ್ರೀ ದೀಪಕ್ ಎಸ್. ಭಟ್ನಾಗರ್ ಅವರು ಈ ಸಂದರ್ಭದಲ್ಲಿ ಮಾತನಾಡಿ, “ಗೇಮ್‍ಪ್ಲೇ ಗೆ ಮಾತ್ರವಲ್ಲದೆ  ಬೆಂಗಳೂರಿನಲ್ಲಿ ಬೆಳೆಯುತ್ತಿರುವ ಎಲ್ಲಾ ಕ್ರಿಕೆಟಿಗರಿಗೂ ಇಂದು ಮಹತ್ವದ ದಿನವಾಗಿದೆ. ಬೆಂಗಳೂರಿನಲ್ಲಿ ಆರಂಭಗೊಂಡ ಎಂ ಎಸ್ ಧೋನಿ  ಕ್ರಿಕೆಟ್ ಅಕಾಡೆಮಿ, ಕ್ರಿಕೆಟ್‍ನಲ್ಲಿ ದೊಡ್ಡ ಸಾಧನೆ ಮಾಡಲು ಬಯಸುವ ಮಕ್ಕಳು ತಮ್ಮ ಕನಸುಗಳನ್ನು ಸಾಕಾರಗೊಳಿಸಲು ಅತ್ಯುತ್ತಮ  ಮೂಲಸೌಕರ್ಯ ಮತ್ತು ವಿಶ್ವ ದರ್ಜೆಯ ತರಬೇತಿ ಸೌಲಭ್ಯಗಳನ್ನು ಹೊಂದಿದೆ,” ಎಂದು ಹೇಳಿದರು. 

ಸ್ವತಃ ಶ್ರೀ ಮಹೇಂದ್ರ ಸಿಂಗ್ ಧೋನಿ ಅಕಾಡೆಮಿಯ ಮಾರ್ಗದರ್ಶಕರಾಗಿರುವುದರಿಂದ, ಬೆಂಗಳೂರಿನ ಎಲ್ಲಾ ಯುವಜನರಿಗೆ ಕ್ರಿಕೆಟ್  ಮಾಂತ್ರಿಕನಿಂದ ಕಲಿಯಲು ಸಾಧ್ಯ ಜೊತೆಗೆ ಮೀಸಲಾದ ಅರ್ಹ ತರಬೇತುದಾರರ ತಂಡದಿಂದಲೂ ಕೂಡ ಕಲಿಯಲು ಉತ್ತಮ ಅವಕಾಶ  ಕಲ್ಪಿಸಲಾಗಿದೆ. ನಾವು ಎಂ ಎಸ್ ಡಿ ಸಿ ಎ ಬೆಂಗಳೂರು ಆರಂಭಿಸುವುದರ ಮೂಲಕ ಭಾರತೀಯ ಕ್ರಿಕೆಟ್ ಬೆಳೆಯಲು ಕೊಡುಗೆ ನೀಡಲು  ಬಯಸುತ್ತೇವೆ ಎಂದು ಶ್ರೀ ದೀಪಕ್ ಎಸ್. ಭಟ್ನಾಗರ್ ಹೇಳಿದರು. 

ಎಂ.ಎಸ್. ಧೋನಿ ಕ್ರಿಕೆಟ್ ಅಕಾಡೆಮಿ ಬೆಂಗಳೂರು, ಇದರ ಸಂಯೋಜಕರಾಗಿರುವ ಶ್ರೀ ಎಂ. ವಿಶ್ವನಾಥ್ ಮಾತನಾಡಿ, “ಬೆಂಗಳೂರಿನಲ್ಲಿ  ಯುವ ಕ್ರಿಕೆಟಿಗರಿಗೆ ಬಹಳ ಸಂಭ್ರಮದ ಸಮಯ ಇದು. ಈಗ, ಶ್ರೇಷ್ಠ ಕ್ರಿಕೆಟಿಗ, ಮಹೇಂದ್ರ ಸಿಂಗ್ ಧೋನಿಯ ಮಾರ್ಗದರ್ಶನದ ಜೊತೆಗೆ  ಅತ್ಯುತ್ತಮ ತರಬೇತುದಾರರಿಂದ ಕ್ರಿಕೆಟ್ ಕಲಿಯಬಹುದು. ಬೆಂಗಳೂರಿನಲ್ಲಿರುವ ಎಲ್ಲಾ ಪೋಷಕರು ತಮ್ಮ ಮಕ್ಕಳನ್ನು ನಮ್ಮ ಅಕಾಡೆಮಿಗೆ  ಕರೆತರಲು ನಾನು ಈ ಮೂಲಕ ಆಹ್ವಾನಿಸುತ್ತೇನೆ.” 

ಒಬ್ಬ ಯಶಸ್ವಿ ಕ್ರಿಕೆಟಿಗನಾಗಲು, ಆತ ಆತ್ಮವಿಶ್ವಾಸದಿಂದಿರಬೇಕು, ಒತ್ತಡದಲ್ಲಿ ತ್ವರಿತ ನಿರ್ಧಾರಗಳನ್ನು ತೆಗೆದುಕೊಳ್ಳಬೇಕು ಮತ್ತು ವಿವಿಧ  ಪರಿಸರಗಳಿಗೆ ಹೊಂದಿಕೊಳ್ಳಬೇಕು ಎಂಬ ನಂಬಿಕೆಯೊಂದಿಗೆ ಎಂ ಎಸ್ ಡಿ ಸಿ ಎ ಕಾರ್ಯನಿರ್ವಹಿಸುತ್ತದೆ. ಕ್ರಿಕೆಟ್ ತಂತ್ರಗಳು ಮತ್ತು  ಕೌಶಲ್ಯಗಳನ್ನು ಅಭಿವೃದ್ಧಿಪಡಿಸಲು ಮತ್ತು ಆಟದ ಅರ್ಥ ಮತ್ತು ಅಂತಃಪ್ರಜ್ಞೆಯನ್ನು ಸುಧಾರಿಸಲು ಅಕಾಡೆಮಿಯ ತರಬೇತಿ ಕ್ರಮವನ್ನು  ವಿನ್ಯಾಸಗೊಳಿಸಲಾಗಿದೆ. ಎಂ ಎಸ್ ಡಿ ಸಿ ಎ ಯ ಗಮನ, ಕೇವಲ ನೆಟ್‍ಗಳಲ್ಲಿ ಪ್ರದರ್ಶನ ನೀಡಲು ಆಟಗಾರರಿಗೆ ಸಹಾಯ ಮಾಡುವುದಲ್ಲ,  ಬದಲಿಗೆ ವಾಸ್ತವವಾಗಿ ಆಟದಲ್ಲಿ ಯಶಸ್ವಿಯಾಗಬಲ್ಲ ವ್ಯಕ್ತಿಯಾಗಿ ಅವರನ್ನು ರೂಪಿಸುವುದು. 

ಎಂ ಎಸ್ ಡಿ ಸಿ ಎ ಯಲ್ಲಿ ತರಬೇತಿಯು ಬಹಳಷ್ಟು ಆಟದ ಪ್ರಜ್ಞೆ ಮತ್ತು ಪ್ರಾಯೋಗಿಕ ಚಟುವಟಿಕೆಗಳನ್ನು ಒಳಗೊಂಡಿರುತ್ತದೆ, ಪಂದ್ಯದ  ಸಮಯದಲ್ಲಿ ಆಡುವವರ ಸಾಮಥ್ರ್ಯವನ್ನು ಅಭಿವೃದ್ಧಿಪಡಿಸುವತ್ತ ಗಮನಹರಿಸುತ್ತದೆ ಹೊರತು ನೆಟ್‍ನಲ್ಲಿ ಕಲಿಸುವುದಲ್ಲ. ಎಂ ಎಸ್ ಡಿ ಸಿ  ಎ ಕ್ರಿಕೆಟ್ ಕೋಚಿಂಗ್ ಪ್ರೋಗ್ರಾಮ್ ಗುಣಮಟ್ಟದ ಕ್ರಿಕೆಟಿಗರನ್ನು ಬೆಳೆಸುವುದನ್ನು ಉತ್ತೇಜಿಸುತ್ತದೆ ಹಾಗೂ ನಾಯಕನಾಗಿರುವ ವ್ಯಕ್ತಿ, ಬಲವಾದ  ತಂಡವನ್ನು ನಡೆಸುವ ಸಾಮಥ್ರ್ಯಗಳನ್ನು ಹೊಂದಿರುತ್ತಾನೆ, ಶ್ರೇಷ್ಠತೆಗಾಗಿ ಶ್ರಮಿಸುತ್ತಾನೆ ಮತ್ತು ಕ್ರೀಡಾ ಮನೋಭಾವ ಮತ್ತು ನ್ಯಾಯಯುತ  ಆಟವನ್ನು ಪ್ರದರ್ಶಿಸುತ್ತಾನೆ ಎಂದು ನಂಬಿದೆ. 

ಆರ್ಕಾ ಸ್ಪೋಟ್ರ್ಸ್‍ನ ಕನಸಿನ ಕೂಸು, ಎಂ.ಎಸ್. ಧೋನಿ ಕ್ರಿಕೆಟ್ ಅಕಾಡೆಮಿ. ನಮ್ಮ ದೇಶದ ಮಹತ್ವಾಕಾಂಕ್ಷಿ ಕ್ರೀಡಾ ಸಮುದಾಯಕ್ಕೆ ಶ್ರೇಷ್ಠ  ಕ್ರಿಕೆಟಿಗರನ್ನು ನೀಡುವ ಏಕೈಕ ಚಿಂತನೆಯೊಂದಿಗೆ ಆರಂಭವಾಗಿದೆ. ಎಂಎಸ್ ಧೋನಿ ಮಾರ್ಗದರ್ಶನ ಮತ್ತು ಮಿಹಿರ್ ದಿವಾಕರ್ ಸ್ಥಾಪಿಸಿದ  ಎಂ ಎಸ್ ಡಿ ಸಿ ಎ ಜಾಗತಿಕ ಮಟ್ಟದಲ್ಲಿ ಕ್ರಿಕೆಟ್ ತರಬೇತಿ ಮತ್ತು ಅಭಿವೃದ್ಧಿಗಾಗಿ ಸ್ಥಾಪಿತವಾಗಿದೆ. ಸುಧಾರಿತ ತಂತ್ರಜ್ಞಾನ, ಪ್ರಧಾನ ತರಬೇತಿ  ಸೌಲಭ್ಯಗಳು ಮತ್ತು ಅರ್ಹ ತರಬೇತುದಾರರನ್ನು ಹೊಂದಿದ ಎಂ ಎಸ್ ಡಿ ಸಿ ಎ ಜಗತ್ತಿನ ಮೂಲೆ ಮೂಲೆಗಳಿಗೂ ತನ್ನ ಛಾಪನ್ನು  ಮೂಢಿಸುವತ್ತ ಗುರಿ ಇಟ್ಟಿದೆ. 

ಎಂ ಎಸ್ ಡಿ ಸಿ ಎ ಬೆಂಗಳೂರು ಬಗ್ಗೆ ಮಾಹಿತಿ 

ಅರ್ಹ ತರಬೇತುದಾರರಿಂದ ಕಲಿಕೆ ಅತ್ಯಾಧುನಿಕ ಸೌಲಭ್ಯ 

70 ಗಜಗಳ ಪಂದ್ಯ ಮೈದಾನ 5 ಸೆಂಟರ್ ಟರ್ಫ್ ಪಿಚ್‍ಗಳು 

2 ಆಸ್ಟ್ರೋ ಟರ್ಫ್ ಪಿಚ್‍ಗಳು 2 ಸಿಮೆಂಟ್ ಪಿಚ್‍ಗಳು 

5 ಅಭ್ಯಾಸ ಮಾಡುವ ಟರ್ಫ್ ಪಿಚ್‍ಗಳು 

ವಿಳಾಸ: ಸರ್ವೇ ನಂ. 34, ಕಾಡ ಅಗ್ರಹಾರ, ಬಿದರಹಳ್ಳಿ ಹೋಬಳಿ, ಬೆಂಗಳೂರು 

ಇಮೇಲ್ ವಿಳಾಸ: info@msdcaindia.com

ಸಂಪರ್ಕಿಸುವ ವ್ಯಕ್ತಿಗಳು: ಶ್ರೀ ವಿಶ್ವನಾಥ್ / ಶ್ರೀ ರೋಹಿತ್ 

ಸಂಪರ್ಕ ಸಂಖ್ಯೆಗಳು: 8073584894 / 8448183607 

ಗೇಮ್ ಪ್ಲೇ: 8431166899 / 8123792377

ಗೇಮ್‍ಪ್ಲೇ ಬಗ್ಗೆ ಮಾಹಿತಿ:  

ಬೆಂಗಳೂರು ಮೂಲದ ಗೇಮ್‍ಪ್ಲೇ ಕ್ರೀಡೆಗಳನ್ನು ಉತ್ತೇಜಿಸುವ ಪ್ರಮುಖ ಕಂಪನಿಗಳಲ್ಲಿ ಒಂದಾಗಿದೆ. ಗೇಮ್‍ಪ್ಲೇ 5 ಟರ್ಫ್  ವಿಕೆಟ್‍ಗಳೊಂದಿಗೆ 13 ಎಕರೆ ಪ್ರದೇಶದಲ್ಲಿ ಕ್ರಿಕೆಟ್ ಸೌಲಭ್ಯವನ್ನು ಹೊಂದಿದೆ. ಈ ಕಂಪನಿಯು 2019 ರಲ್ಲಿ ಶ್ರೀ ದೀಪಕ್ ಎಸ್. ಭಟ್ನಾಗರ್  ಅವರಿಂದ ಆರಂಭವಾಯಿತು. ದೀಪಕ್ ಅವರು ಕ್ರಿಕೆಟ್ ಬಗ್ಗೆ ವಿಶೇಷ ಪ್ರೀತಿಯನ್ನು ಹೊಂದಿರುವವರು ಹಾಗೂ ಸ್ವತಃ ಕ್ರಿಕೆಟಿಗರೂ ಕೂಡ.  ಗೇಮ್‍ಪ್ಲೇ ಶೀಘ್ರದಲ್ಲೇ ಕ್ರೀಡಾ ರೆಸಾರ್ಟ್ ಆರಂಭಿಸಲಿದ್ದು, ಸೆಮಿ-ಒಲಿಂಪಿಕ್ ಗಾತ್ರದ ಈಜುಕೊಳ ಮತ್ತು ಡಿಸೈನರ್ ಈಜುಕೊಳ, 2  ಲೌಂಜ್ ಕೆಫೆಗಳು, 15 ಕಾಟೇಜ್‍ಗಳು ಇರಲಿವೆ, ಮಹಿಳೆಯರು ಮತ್ತು ಮಕ್ಕಳಿಗಾಗಿ ವಿಶೇಷ ಆಟದ ಮೈದಾನ ಹಾಗೂ 50,000 ಚದರ  ಅಡಿಯ ಪಾರ್ಟಿ ಸ್ಥಳವನ್ನು ಹೊಂದಿರಲಿದೆ.

 

ನಿಮಗೆ ಈ ಮಾಹಿತಿ ಇಷ್ಟ ಆಗಿದ್ದರೆ ಲೈಕ್ ಮಾಡಿ ಶೇರ್ ಮಾಡಿ ನಿಮ್ಮ ಅನಿಸಿಕೆಗಳನ್ನು ಕಾಮೆಂಟ್ ಮೂಲಕ ತಿಳಿಸಿ ಇನ್ನಷ್ಟು ಮಾಹಿತಿಗಾಗಿ ಈ ಕೆಳಗಿನ ಲಿಂಕ್ ಕ್ಲಿಕ್ ಮಾಡಿ ನಮ್ಮನ್ನು ಫಾಲೋ ಮಾಡಿ

 

►Subscribe to Planet Tv Kannada

https://bit.ly/3hYOXHc

 ►Follow us on Facebook

https://www.facebook.com/Planettvkannada

 ►Follow us on Blogspot

https://planettvkannada.blogspot.com

 ►Follow us on Dailymotion

https://www.dailymotion.com/planettvkannada

 ►Follow us on Instagram

https://www.instagram.com/planettvkannada/

 ►Follow us on Pinterest

https://in.pinterest.com/Planettvkannada/

 ►Follow us on Koo App

https://www.kooapp.com/profile/planettvkannada

 ►Follow us on Twitter

https://twitter.com/Planettvkannada

 ►Follow us on Share Chat

https://sharechat.com/profile/planettvkannada

 ►Follow us on Tumgir

https://www.tumgir.com/planettvkannada

 ►Follow us on Tumbler

https://planettvkannada.tumblr.com/

 ►Follow us on Telegram

https://t.me/Planettvkannada

Enjoyed this article? Stay informed by joining our newsletter!

Comments

You must be logged in to post a comment.

Related Articles
About Author