ರಾಷ್ಟ್ರಪ್ರಶಸ್ತಿ ವಿಜೇತ ಡೊಳ್ಳು ಸಿನಿಮಾ ಒಟಿಟಿಯಲ್ಲಿ ಬಿಡುಗಡೆ ಆಗಿದೆ. ದೀಪಾವಳಿ ಸಮೀಪದಲ್ಲಿರುವಾಗ ಅಮೇಜಾನ್ ಪ್ರೈಮ್ ನಲ್ಲಿ ಚಿತ್ರ ರಿಲೀಸ್ ಆಗಿದೆ.
ಸಾಗರ್ ಪುರಾಣಿಕ್ ನಿರ್ದೇಶನದ, ಪವನ್ ಒಡೆಯರ್ ನಿರ್ಮಾಣದ ಈ ಸಿನಿಮಾ ಚಿತ್ರಮಂದಿರದಲ್ಲಿ ತೆರೆಕಂಡು ಯಶಸ್ವಿಯಾಗಿದೆ.
ಸಹ ನಿರ್ದೇಶಕನಾಗಿ ಚಿತ್ರರಂಗಕ್ಕೆ ಬಂದಿದ್ದ ಪವನ್ ಒಡೆಯರ್ ಈ ಸಿನಿಮಾ ಮೂಲಕ ನಿರ್ಮಾಣ ಕ್ಷೇತ್ರಕ್ಕೆ ಕಾಲಿಟ್ಟರು.
ಸಾಗರ್ ಪುರಾಣಿಕ ಚಿತ್ರ ನಿರ್ದೇಶನ ಮಾಡಿದ್ದು ಕಾರ್ತಿಕ್ ಮಹೇಶ್ ಪ್ರಮುಖ ಪಾತ್ರ ವಹಿಸಿದ್ದಾರೆ. ನಿಧಿ ಹೆಗ್ಡೆ ನಾಯಕಿಯಾಗಿ, ಸಂಗೀತ ನಿರ್ದೇಶಕ ಅನಂತ್ ಕಾಮತ್, ಹಿರಿಯ ನಟ ಚಂದ್ರ ಮಯೂರ್, ಶರಣ್ಯ ಸುರೇಶ್, ವರುಣ್ ಶ್ರೀನಿವಾಸ್ ಇದ್ದಾರೆ. ಬಾಬು ಹಿರಣ್ಣಯ್ಯ, ಚಂದ್ರ ಮಯೂರ್, ಶರಣ್ ಸುರೇಶ್ ಚಿತ್ರದ ಮುಖ್ಯ ಪಾತ್ರಧಾರಿಗಳು. ಡೊಳ್ಳು ಕುಣಿತದ ಸುತ್ತ ಸಾಗುವ ಸಿನಿಮಾ ‘ಡೊಳ್ಳು’ 68ನೇ ರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಅತ್ಯುತ್ತಮ ಕನ್ನಡ ಚಿತ್ರ ಪ್ರಶಸ್ತಿ ಪಡೆದಿದೆ. ಚಿತ್ರಕ್ಕೆ ಅಭಿಲಾಷ್ ಕಲಾಥಿ ಕ್ಯಾಮೆರಾ ಹಿಡಿದಿದ್ದಾರೆ.
image courtesy: Pavan Wadeyar Twitter
You must be logged in to post a comment.