ಬೆಂಗಳೂರು: ಕರ್ನಾಟಕ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಯಾಗಿ ಪ್ರಸನ್ನ ಬಾಲಚಂದ್ರ ವರಳೆ ಇಂದು (ಶನಿವಾರ) ಪ್ರಮಾಣ ವಚನ ಸ್ವೀಕರಿಸಿದರು. ಸರಳ, ಆಕರ್ಷಕ ಸಮಾರಂಭದಲ್ಲಿ ರಾಜ್ಯಪಾಲ ತಾವರ್‌ಚಂದ್ ಗೆಹ್ಲೋಟ್ ಪ್ರಸನ್ನ ಅವರಿಗೆ ಪ್ರಮಾಣ ವಚನ ಬೋಧಿಸಿದರು.
ರಾಜಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕರ್ನಾಟಕ ಹೈಕೋರ್ಟ್ ನ್ಯಾಯಮೂರ್ತಿಗಳು, ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ ಮತ್ತು ರಾಜ್ಯ ಸರ್ಕಾರದ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.
ಈ ಸಂದರ್ಭದಲ್ಲಿ ನ್ಯಾಯಮೂರ್ತಿ ವರಳೆ ಅವರ ಕುಟುಂಬದ ಸದಸ್ಯರು ಉಪಸ್ಥಿತರಿದ್ದರು.
ನ್ಯಾಯಮೂರ್ತಿ ವರಳೆ ಅವರು 23 ಜೂನ್ 1962 ರಂದು ಬೆಳಗಾವಿ ಜಿಲ್ಲೆ ನಿಪ್ಪಾಣಿಯಲ್ಲಿ ಜನಿಸಿದರು.
ಅವರು ಡಾ. ಬಾಬಾಸಾಹೇಬ್ ಅಂಬೇಡ್ಕರ್ ಮರಾಠವಾಡ ವಿಶ್ವವಿದ್ಯಾಲಯದಿಂದ ಕಲೆ ಮತ್ತು ಕಾನೂನಿನಲ್ಲಿ ಪದವಿ ಪಡೆದರು.
ಅವರು 1985 ರಲ್ಲಿ ವಕೀಲರಾಗಿ ವೃತ್ತಿ ಪ್ರಾರಂಭಿಸಿದರು.
ಜುಲೈ 2008 ರಲ್ಲಿ ಅವರು ಬಾಂಬೆ ಹೈಕೋರ್ಟ್‌ನ ಹೆಚ್ಚುವರಿ ನ್ಯಾಯಾಧೀಶರಾಗಿ ನೇಮಕಗೊಂಡರು ಮತ್ತು ಮೂರು ವರ್ಷಗಳ ನಂತರ ಕಾಯಂ ನ್ಯಾಯಾಧೀಶರಾದರು.
Image courtesy: CM of Karnataka Facebook page
You must be logged in to post a comment.