ಗುಂಡ್ಲುಪೇಟೆ: ಜಾತ್ಯಾತೀತ ಜನತಾದಳ ಪಕ್ಷದ ವತಿಯಿಂದ, ಮೈಸೂರು ಮತ್ತು ಚಾಮರಾಜನಗರ ಜಿಲ್ಲೆಯ ಸ್ಥಳೀಯ ಸಂಸ್ಥೆಗಳಿಂದ ನಡೆಯುವ ವಿಧಾನಪರಿಷತ್ ಚುನಾವಣೆ ಹಿನ್ನೆಲೆಯಲ್ಲಿ ಗುಂಡ್ಲುಪೇಟೆ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಗೆ ಸಂಬಂಧಿಸಿದಂತೆ ಗುಂಡ್ಲುಪೇಟೆಯಲ್ಲಿ ಪ್ರಚಾರ ಸಭೆಯನ್ನು ಹಮ್ಮಿಕೊಳ್ಳಲಾಗಿತ್ತು.
ಈ ಸಂದರ್ಭದಲ್ಲಿ ಮಾನ್ಯ ಶಾಸಕರು ಹಾಗೂ ಮಾಜಿ ಸಚಿವರಾದ ಸಾ.ರಾ. ಮಹೇಶ್ ರವರು ಉದ್ಘಾಟನೆ ಮಾಡಿದರು ಹಾಗೂ ಅಭ್ಯರ್ಥಿಯ ಪರವಾಗಿ ಮತಯಾಚನೆ ಮಾಡಿದರು.
ಕಾರ್ಯಕ್ರಮದಲ್ಲಿ ಪಿರಿಯಾಪಟ್ಟಣ ಶಾಸಕರಾದ ಶ್ರೀ ಮಹದೇವ ರವರು, ಟಿ ನರಸೀಪುರ ಶಾಸಕರಾದ ಶ್ರೀ ಅಶ್ವಿನ್ ಕುಮಾರ್, ಚಾಮರಾಜನಗರ ಜಿಲ್ಲಾ ಅಧ್ಯಕ್ಷರಾದ ಶ್ರೀ ಮಂಜುನಾಥ,ಎಂ.ಎಲ್.ಸಿ. ಅಭ್ಯರ್ಥಿಯಾದ ಶ್ರೀ ಸಿ.ಎನ್. ಮಂಜೇಗೌಡರು, ಮಾಜಿ ಉಪ ಪೌರರಾದ ಶ್ರೀ ಶಫಿ ಅಹಮದ್, ಶ್ರೀ ಶೈಲೇಂದ್ರ ಕುಮಾರ್, ನಗರ ಪಾಲಿಕೆ ಮಾಜಿ ಸದಸ್ಯರಾದ ಶ್ರೀ ಮಲ್ಲೇಶ್, ಮುಖಂಡರಾದ ಶ್ರೀ MT ಕುಮಾರ್ ರವರು ಮುಂತಾದವರು ಉಪಸ್ಥಿತರಿದ್ದರು.
ನಿಮಗೆ ಈ ಮಾಹಿತಿ ಇಷ್ಟ ಆಗಿದ್ದರೆ ಲೈಕ್ ಮಾಡಿ ಶೇರ್ ಮಾಡಿ ನಿಮ್ಮ ಅನಿಸಿಕೆಗಳನ್ನು ಕಾಮೆಂಟ್ ಮೂಲಕ ತಿಳಿಸಿ
You must be logged in to post a comment.