ಪೂಜೆಯ ನೆಪದಲ್ಲಿ ಅನಾರೋಗ್ಯ ಪೀಡಿತ ಮಹಿಳೆಯ ತಲೆಗೆ ಹೊಡೆದ ಪೂಜಾರಿ: ಮಹಿಳೆಯ ದಾರುಣ ಸಾವು

ಪೂಜೆಯ ನೆಪದಲ್ಲಿ ಅನಾರೋಗ್ಯ ಪೀಡಿತ ಮಹಿಳೆಯ ತಲೆಗೆ ಹೊಡೆದ ಪೂಜಾರಿ: ಮಹಿಳೆಯ ದಾರುಣ ಸಾವು

 

ಹಾಸನ: ಪೂಜೆಯ ನೆಪದಲ್ಲಿ ಪೂಜಾರಿಯೋರ್ವ ಅನಾರೋಗ್ಯ ಪೀಡಿತ ಮಹಿಳೆಯ ತಲೆಗೆ ಹೊಡೆದಿದ್ದು, ಪರಿಣಾಮವಾಗಿ ಮಹಿಳೆ ಸಾವನ್ನಪ್ಪಿರುವ ಅಮಾನವೀಯ ಘಟನೆ ಚನ್ನರಾಯಪಟ್ಟಣ ತಾಲೂಕಿನ ಬೆಕ್ಕ ಗ್ರಾಮದಲ್ಲಿ ನಡೆದಿದೆ.

 

ವರದಿಯ ಪ್ರಕಾರ, ಡಿಸೆಂಬರ್ 7ರಂದು ಈ ಘಟನೆ ನಡೆದಿದೆ ಎನ್ನಲಾಗಿದೆ. 47 ವರ್ಷದ ಪಾರ್ವತಿ ಅವರು ತಲೆ ನೋವಿನಿಂದ ಬಳಲುತ್ತಿದ್ದು, ಆಸ್ಪತ್ರೆಗೆ ಹೋಗಿಯೂ ಗುಣಮುಖರಾಗದಿದ್ದ ಹಿನ್ನೆಲೆಯಲ್ಲಿ ಗ್ರಾಮದ ಪಿರಿಯಾಪಟ್ಟಣದಮ್ಮ ದೇವರ ಪೂಜಾರಿ ಮಧು ಎಂಬವರ ಬಳಿಗೆ ಕರೆದುಕೊಂಡು ಹೋಗಿದ್ದು, ತಲೆ ನೋವನ್ನು ಬೆತ್ತದಿಂದ ಸರಿಪಡಿಸುವುದಾಗಿ ಹೇಳಿದ ಪೂಜಾರಿ ಬೆತ್ತದಿಂದ ಮಹಿಳೆಗೆ ಹಲ್ಲೆ ನಡೆಸಿದ್ದಾನೆ ಎಂದು ತಿಳಿದು ಬಂದಿದೆ.

 

ಪೂಜಾರಿಯ ಏಟಿನಿಂದಾಗಿ ಡಿಸೆಂಬರ್ 8ರಂದು ಮಹಿಳೆ ತೀವ್ರ ಅಸ್ವಸ್ಥಗೊಂಡಿದ್ದು, ಅವರನ್ನು ಹಾಸನ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಆದರೆ ಚಿಕಿತ್ಸೆ ಫಲಿಸದೇ ಅವರು ಮೃತಪಟ್ಟಿದ್ದಾರೆ. ಈ ಘಟನೆ ಸಂಬಂಧ ಡಿಸೆಂಬರ್ 9ರಂದು ಶ್ರವಣಬೆಳಗೊಳ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

Enjoyed this article? Stay informed by joining our newsletter!

Comments

You must be logged in to post a comment.

About Author